Big News: 10 ವರ್ಷಗಳ ಜೈಲು ಶಿಕ್ಷೆ ಅಮಾನತಿಗೆ ಸುಪ್ರೀಂ ನಿರಾಕರಣೆ: ಜೈಲಿನಲ್ಲೇ ದೀಪಾವಳಿ ಕಳೆಯಲಿದ್ದಾರೆ ತೇಜ್‌ಪಾಲ್
ನವದೆಹಲಿ: ಮಾಜಿ ತೆಹಲ್ಕಾ ಮುಖ್ಯ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ನಿಂದ ತೀವ್ರ ಆಘಾತ ಎದುರಾಗಿದೆ. 2013ರಲ್ಲಿ ಗೋವಾದಲ್ಲಿ ನಡೆದಿದ್ದ ಬಹುಚರ್ಚಿತ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ (Big News) ಅವರಿಗೆ ವಿಧಿಸಲಾಗಿರುವ 10 ವರ್ಷಗಳ ಕಠಿಣ ಜೈಲು ಶಿಕ್ಷೆಯನ್ನು ಅಮಾನತಿನಲ್ಲಿಡಲು ಉನ್ನತ ನ್ಯಾಯಾಲಯವು ಸ್ಪಷ್ಟವಾಗಿ ನಿರಾಕರಿಸಿದೆ. ಅಷ್ಟೇ ಅಲ್ಲದೆ, ಮುಂಬರುವ ದೀಪಾವಳಿ ಹಬ್ಬದ ಪ್ರಯುಕ್ತ ಮಧ್ಯಂತರ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನೂ ಸಹ ಕೋರ್ಟ್ ತಿರಸ್ಕರಿಸಿದೆ. ನ್ಯಾಯಮೂರ್ತಿಗಳಾದ ಎಂ.ಎಂ. ಸುಂದರೇಶ್ ಹಾಗೂ ಪ್ರಸನ್ನ ಬಿ. ವರಾಳೆ ಅವರನ್ನೊಳಗೊಂಡ…
