Politics: ರಾಜ್ಯಪಾಲರ ವಿರುದ್ಧ ಕಾನೂನು ಸಮರ, ಸುಪ್ರೀಂಗೆ ಅರ್ಜಿ ಸಲ್ಲಿಸಲು ರಾಜ್ಯದ ನಿರ್ಧಾರ
ಬೆಂಗಳೂರು: ರಾಜ್ಯಪಾಲರ ವಿರುದ್ಧ ಕಾನೂನು ಸಮರಕ್ಕೆ ರಾಜ್ಯ ಸರ್ಕಾರ (Politics) ಮುಂದಾಗಿದ್ದು, ಈ ವಿಚಾರವಾಗಿ ರಾಜ್ಯದ ಎಜಿ ಶಶಿಕಿರಣ್ ಶೆಟ್ಟಿ ಅವರು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ನಾಳೆ ತನಕ ಕಾಯಲು ನಿರ್ಧಾರ ಸದ್ಯದ ಮಾಹಿತಿಗಳ ಪ್ರಕಾರ, ರಾಜ್ಯ ಸರ್ಕಾರ ಹಾಗೂ ರಾಜ್ಯಪಾಲರ ನಡುವೆ ಜಟಾಪಟಿ ನಡೆಯುತ್ತಿದೆ. ರಾಜ್ಯಪಾಲರ ಅನುಮತಿ ಇಲ್ಲದೇ ಅಧಿವೇಶನ ನಡೆಸಲು ಆಗುವುದಿಲ್ಲ. ಹಾಗಾಗಿ ನಾಳೆ ತನಕ ಕಾಯಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ನಾಳೆ ರಾಜ್ಯಪಾಲರು ಭಾಷಣಕ್ಕೆ ಬರ್ತಾರೆ ಎನ್ನುವ ವಿಶ್ವಾಸದಲ್ಲಿ ಸರ್ಕಾರ ಇದ್ದು,…
