Toxic: ಚಿತ್ರಮಂದಿರದ ಬಳಿಕ ಒಟಿಟಿಯಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದ ‘ಟಾಕ್ಸಿಕ್’: ಅಧಿಕೃತ ಘೋಷಣೆ ಬಾಕಿ.
ಬೆಂಗಳೂರು: ‘ಕೆಜಿಎಫ್: ಚಾಪ್ಟರ್ 2’ ಚಿತ್ರದ ಬ್ರಹ್ಮಾಂಡ ಯಶಸ್ಸಿನ ಬಳಿಕ ರಾಕಿಂಗ್ ಸ್ಟಾರ್ ಯಶ್ ಅವರ ಮುಂದಿನ ಚಿತ್ರಕ್ಕಾಗಿ ಅಭಿಮಾನಿಗಳು ಬರೋಬ್ಬರಿ ನಾಲ್ಕು ವರ್ಷಗಳ ಕಾಲ ಕಾಯಬೇಕಾಯಿತು. ಹೀಗೆ ಭಾರಿ ನಿರೀಕ್ಷೆ ಮೂಡಿಸಿದ್ದ ‘ಟಾಕ್ಸಿಕ್: ಎ ಫೇರಿಟೇಲ್ ಫಾರ್ ಗ್ರೋನ್-ಅಪ್ಸ್’ (Toxic) ಸಿನಿಮಾ ಗೀತು ಮೋಹನ್‌ದಾಸ್ ನಿರ್ದೇಶನದಲ್ಲಿ ತೆರೆಗೆ ಬಂದಿತ್ತಾದರೂ, ಹಲವು ಬಾರಿ ಬಿಡುಗಡೆ ದಿನಾಂಕ ಮುಂದೂಡಲ್ಪಟ್ಟು ಅಂತಿಮವಾಗಿ ಚಿತ್ರಮಂದಿರ ಪ್ರವೇಶಿಸಿತ್ತು. ಆದರೆ, ಪ್ರೇಕ್ಷಕರ ಬೆಂಚ್‌ಮಾರ್ಕ್ ನಿರೀಕ್ಷೆಗಳನ್ನು ತಲುಪಲು ವಿಫಲವಾದ ಈ ಸಿನಿಮಾ ಗಲ್ಲಾಪೆಟ್ಟಿಗೆಯಲ್ಲಿ ನಿರಾಸೆ ಮೂಡಿಸಿತ್ತು….
