Supreme Court: ಸಾರಿಗೆ ವಾಹನಗಳಿಗೆ ಸ್ಪೀಡ್ ಗವರ್ನರ್ ಕಡ್ಡಾಯ: ಸುಪ್ರೀಂ ಆದೇಶ
ನವದೆಹಲಿ: ಭಾರತದ ರಸ್ತೆಗಳಲ್ಲಿ ‘ಲೇನ್ ಶಿಸ್ತು’ ಎಂಬ ಪರಿಕಲ್ಪನೆಯೇ ಇಲ್ಲದಂತಾಗಿದೆ ಎಂದು ಸುಪ್ರೀಂ ಕೋರ್ಟ್ (Supreme Court) ತೀವ್ರ ಕಳವಳ ವ್ಯಕ್ತಪಡಿಸಿದೆ. ರಸ್ತೆ ಸುರಕ್ಷತೆಗೆ ಸಂಬಂಧಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜೆ.ಬಿ. ಪರ್ದಿವಾಲಾ ಮತ್ತು ನ್ಯಾಯಮೂರ್ತಿ ಕೆ.ವಿ. ವಿಶ್ವನಾಥನ್ ಅವರಿದ್ದ ಪೀಠವು, ದೇಶದಲ್ಲಿ ಸಂಭವಿಸುವ ಬಹುತೇಕ ಅಪಘಾತಗಳಿಗೆ ಲೇನ್ ಶಿಸ್ತು ಪಾಲಿಸದಿರುವುದೇ ಮುಖ್ಯ ಕಾರಣವಾಗಿದೆ ಎಂದು ಅಭಿಪ್ರಾಯಪಟ್ಟಿದೆ. ಸರ್ಕಾರಗಳು ಈ ನಿಟ್ಟಿನಲ್ಲಿ ಹೆಚ್ಚಿನ ಗಮನಹರಿಸಿದರೆ ಅಪಘಾತಗಳ ಸಂಖ್ಯೆಯನ್ನು ಗಣನೀಯವಾಗಿ ಕಡಿಮೆ ಮಾಡಬಹುದು ಎಂದು ನ್ಯಾಯಾಲಯ ಕಿವಿಮಾತು…
