KEA: UG NEET-26: ವೈದ್ಯಕೀಯ 3ನೇ ಸುತ್ತಿನ ತಾತ್ಕಾಲಿಕ ಸೀಟು ಹಂಚಿಕೆ ಫಲಿತಾಂಶ ಪ್ರಕಟ!
ಬೆಂಗಳೂರು: ರಾಜ್ಯದ ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿ ನಿರೀಕ್ಷೆಯಲ್ಲಿದ್ದ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಮಹತ್ವದ ಮಾಹಿತಿಯೊಂದನ್ನು ನೀಡಿದೆ. 2026ನೇ ಸಾಲಿನ ಯುಜಿ ನೀಟ್ (UG NEET) ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‌ಗಳ ಮೂರನೇ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಪ್ರಾಧಿಕಾರವು ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದ್ದು, ಸೀಟು ರದ್ದತಿ ಹಾಗೂ ಕೌನ್ಸೆಲಿಂಗ್‌ನಿಂದ ಹೊರನಡೆಯಲು ಅಭ್ಯರ್ಥಿಗಳಿಗೆ ಮುಖ್ಯ ಸೂಚನೆಗಳನ್ನು ರವಾನಿಸಿದೆ. ವಿಶೇಷ ವಿನಾಯಿತಿ ನೀಡಿದ ಪ್ರಾಧಿಕಾರ ಮೆಡಿಕಲ್ ಕೌನ್ಸೆಲಿಂಗ್ ಕಮಿಟಿ…
