UT Khader: ಮಂತ್ರಿಗಿರಿಗಾಗಿ ನಾನು ದೆಹಲಿಗೆ ಹೋಗಲ್ಲ, ಜನರ ಸೇವೆಗಾಗಿ ಮಂಗಳೂರಿಗೆ ಹೋಗ್ತೀನಿ: ಸ್ಪೀಕರ್ ಯು.ಟಿ. ಖಾದರ್ ಸ್ಪಷ್ಟನೆ
ಬೆಂಗಳೂರು: ರಾಜ್ಯದಲ್ಲಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನೂತನ ಸಚಿವ ಸಂಪುಟ ರಚನೆಯ ಕಸರತ್ತು ಬಿರುಸಿನಿಂದ ಸಾಗಿದ್ದು, ದೆಹಲಿಯಲ್ಲಿ ಮಂತ್ರಿ ಸ್ಥಾನಕ್ಕಾಗಿ ಶಾಸಕರು ಭಾರಿ ಲಾಬಿ ನಡೆಸುತ್ತಿರುವ ಬೆನ್ನಲ್ಲೇ ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ (UT Khader) ಅತ್ಯಂತ ಪ್ರಮುಖ ಹೇಳಿಕೆ ನೀಡಿದ್ದಾರೆ. ಹೊಸ ಕ್ಯಾಬಿನೆಟ್‌ನಲ್ಲಿ ತಮಗೆ ಸ್ಥಾನ ನೀಡುವುದು ಅಥವಾ ಬಿಡುವುದು ಪಕ್ಷದ ವರಿಷ್ಠರ ವಿವೇಚನೆಗೆ ಬಿಟ್ಟದ್ದು. ತಾವಂತೂ ಸಚಿವ ಸ್ಥಾನದ ಆಕಾಂಕ್ಷಿಯಾಗಿ ಹಠ ಹಿಡಿದು ಹೈಕಮಾಂಡ್ ಭೇಟಿಗೆ ದೆಹಲಿಗೆ ಹೋಗುತ್ತಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ….
