UT Khader: ನಕಲಿ ಔಷಧ ಮಾಫಿಯಾ ಮತ್ತು ಕಳಪೆ ಆಹಾರಕ್ಕೆ ಶೀಘ್ರವೇ ಬೀಳಲಿದೆ ಬ್ರೇಕ್
ಮಂಗಳೂರು: ರಾಜ್ಯದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ನಕಲಿ ಔಷಧ ಮಾಫಿಯಾ ಹಾಗೂ ಹೋಟೆಲ್, ರಸ್ತೆಬದಿಯ ತಿನಿಸು ಕೇಂದ್ರಗಳಲ್ಲಿ ಮಾರಾಟವಾಗುತ್ತಿರುವ ಕಳಪೆ ಮತ್ತು ಅಸ್ವಚ್ಛ ಆಹಾರ ಪದಾರ್ಥಗಳಿಗೆ ಶಾಶ್ವತವಾಗಿ ಕಡಿವಾಣ ಹಾಕಲು ಸರ್ಕಾರ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಈ ನಿಟ್ಟಿನಲ್ಲಿ ಪ್ರತಿಯೊಂದು ತಾಲೂಕು ಮಟ್ಟದಲ್ಲೂ ನಿವೃತ್ತ ಹಿರಿಯ ನಾಗರಿಕರನ್ನು ಒಳಗೊಂಡ ವಿಶೇಷ ‘ವಾಚ್ ಟೀಮ್’ ರಚಿಸಲು ಚಿಂತನೆ ನಡೆಸಲಾಗಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ (UT Khader) ಶನಿವಾರ ಮಂಗಳೂರಿನ ಸರ್ಕ್ಯೂಟ್ ಹೌಸ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ….
