Eshwar Khandre: ಕೂಲಿ ಹಣ ಪಾವತಿಯಲ್ಲಿ ವಿಳಂಬ: 308 ಅಧಿಕಾರಿಗಳಿಗೆ ಈಶ್ವರ ಖಂಡ್ರೆ ನೋಟಿಸ್!
ಬೆಂಗಳೂರು: ಗ್ರಾಮೀಣ ಭಾಗದ ಬಡ ಕೂಲಿಕಾರರ ಜೀವನಾಡಿಯಾಗಿರುವ ‘ವಿಬಿಜಿ ರಾಮ್ ಜಿ’ (ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ) ಯೋಜನೆಯಡಿ ಕೆಲಸ ಮಾಡಿದ ಅಕುಶಲ ಕಾರ್ಮಿಕರಿಗೆ ಸಮಯಕ್ಕೆ ಸರಿಯಾಗಿ ಕೂಲಿ ಹಣ ಪಾವತಿಸದೆ ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳ ವಿರುದ್ಧ ರಾಜ್ಯ ಸರ್ಕಾರ ತೀವ್ರ ಕೆಂಡಾಮಂಡಲವಾಗಿದೆ. ಕೂಲಿ ಪಾವತಿಯಲ್ಲಿ ಭಾರಿ ವಿಳಂಬ ಧೋರಣೆ ಅನುಸರಿಸಿದ 308 ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು (PDO), 74 ತಾಲೂಕು ಕಾರ್ಯನಿರ್ವಹಣಾಧಿಕಾರಿಗಳು (EO) ಹಾಗೂ 12 ಜಿಲ್ಲಾ ಪಂಚಾಯತಿಗಳ ಉಪ ಕಾರ್ಯದರ್ಶಿಗಳಿಗೆ (DS) ತಕ್ಷಣವೇ…
