B Nagendra: ವಾಲ್ಮೀಕಿ ನಿಗಮದ ಹಗರಣ: ಮಾಜಿ ಸಚಿವ ಬಿ. ನಾಗೇಂದ್ರಗೆ ಮತ್ತೆ ಇಡಿ ಶಾಕ್
ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಕೋಟ್ಯಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಾಜಿ ಸಚಿವ ಬಿ. ನಾಗೇಂದ್ರ (B Nagendra) ಅವರಿಗೆ ಜಾರಿ ನಿರ್ದೇಶನಾಲಯ (ED) ಮತ್ತೆ ತನಿಖೆಯ ಬಿಸಿ ಮುಟ್ಟಿಸಿದೆ. ಈಗಾಗಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಪ್ರಾಸಿಕ್ಯೂಷನ್ ಭೀತಿಯಲ್ಲಿರುವ ಮಾಜಿ ಸಚಿವರಿಗೆ, ಇಡಿ ಅಧಿಕಾರಿಗಳು ನೋಟಿಸ್ ನೀಡಿದ ಹಿನ್ನೆಲೆಯಲ್ಲಿ ಅವರು ಬೆಂಗಳೂರಿನ ಇಡಿ ಕಚೇರಿಗೆ ಹಾಜರಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ (ದೋಷಾರೋಪಣಾಪಟ್ಟಿ) ಸಲ್ಲಿಕೆಯಾದ ಬಳಿಕ, ಮತ್ತಷ್ಟು…
