Vijay: ಪೆರಂಬೂರ್ ಹಾಗೂ ಟ್ರಿಚಿ ಎರಡೂ ಕ್ಷೇತ್ರಗಳಲ್ಲಿ ವಿಜಯ್‌ಗೆ ಭರ್ಜರಿ ಗೆಲುವು!
ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶವು ಹೊಸ ಇತಿಹಾಸಕ್ಕೆ ಸಾಕ್ಷಿಯಾಗಿದ್ದು, ನಟ ವಿಜಯ್ (Vijay) ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಅಕ್ಷರಶಃ ವಿಜಯ ಪತಾಕೆ ಹಾರಿಸಿದೆ. ಸ್ವತಃ ವಿಜಯ್ ಅವರು ಸ್ಪರ್ಧಿಸಿದ್ದ ಚೆನ್ನೈನ ಪೆರಂಬೂರ್ ಮತ್ತು ತಿರುಚಿರಾಪಳ್ಳಿ ಪೂರ್ವ ಎರಡೂ ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸುವ ಮೂಲಕ ಅಧಿಪತ್ಯ ಸ್ಥಾಪಿಸಿದ್ದಾರೆ. ಡಿಎಂಕೆ ಹಿಡಿತದಲ್ಲಿದ್ದ ಈ ಕ್ಷೇತ್ರಗಳಲ್ಲಿ ವಿಜಯ್ ಅವರ ಎಂಟ್ರಿ ದ್ರಾವಿಡ ಪಕ್ಷಗಳ ಭದ್ರಕೋಟೆಯನ್ನು ಛಿದ್ರಗೊಳಿಸಿದೆ. ಪ್ರಬಲ ಎದುರಾಳಿಗಳ ವಿರುದ್ಧ ಜಯ: ಚೆನ್ನೈನ ಪೆರಂಬೂರ್ ಕ್ಷೇತ್ರವು ದಶಕಗಳಿಂದ…
