Congress: ಸಚಿವ ಸ್ಥಾನ ಸಿಗದಿದ್ದರೆ ಸಾಮೂಹಿಕ ರಾಜೀನಾಮೆ ಎಚ್ಚರಿಕೆ: ಹೈಕಮಾಂಡ್‌ಗೆ ಹುನಗುಂದ ಕಾಂಗ್ರೆಸ್ ಘಟಕದ ಬಂಡಾಯದ ಶಾಕ್!
ಬೆಂಗಳೂರು: ರಾಜ್ಯದಲ್ಲಿ ಹೊಸ ಸರ್ಕಾರದ ಮಂತ್ರಿ ಮಂಡಲ ರಚನೆಯ ಕಸರತ್ತು ಅಂತಿಮ ಘಟ್ಟ ತಲುಪುತ್ತಿರುವ ಬೆನ್ನಲ್ಲೇ, ಆಡಳಿತಾರೂಢ ಕಾಂಗ್ರೆಸ್ (Congress) ಪಾಳಯದಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಬಾಗಲಕೋಟೆ ಜಿಲ್ಲೆಯ ಹುನಗುಂದ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರು ರಾಜಧಾನಿಯ ಪ್ರೆಸ್ ಕ್ಲಬ್‌ನಲ್ಲಿ ತುರ್ತು ಜಂಟಿ ಪತ್ರಿಕಾಗೋಷ್ಠಿ ನಡೆಸಿ, ತಮ್ಮ ಶಾಸಕರಿಗೆ ಸಚಿವ ಸ್ಥಾನ ನೀಡದಿದ್ದರೆ ಪಕ್ಷಕ್ಕೆ ಭಾರಿ ಪೆಟ್ಟು ನೀಡುವ ನೇರ ವಾರ್ನಿಂಗ್ ನೀಡಿದ್ದಾರೆ. ಕ್ಷೇತ್ರದ ವರ್ಚಸ್ವಿ ಶಾಸಕರಾಗಿರುವ ವಿಜಯಾನಂದ್ ಎಸ್. ಕಾಶಪ್ಪನವರ್ ಅವರಿಗೆ ನೂತನ ಸಂಪುಟದಲ್ಲಿ ಮಂತ್ರಿ ಗಾದಿ…
