CM Siddaramaiah: ವಿಧಾನಸೌಧದಲ್ಲಿ ಅಧಿಕಾರಿಗಳ ಬೆವರಿಳಿಸಿದ ಸಿಎಂ ಸಿದ್ದರಾಮಯ್ಯ: ಬಜೆಟ್ ಘೋಷಣೆ ಜಾರಿಗೆ ಕಟ್ಟುನಿಟ್ಟಿನ ಗಡುವು
ಬೆಂಗಳೂರು: ರಾಜ್ಯದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಇಂದು ವಿಧಾನಸೌಧದಲ್ಲಿ ಹಿರಿಯ ಅಧಿಕಾರಿಗಳ ಮಹತ್ವದ ಸಭೆ ನಡೆಸಿದರು. ಸರ್ಕಾರದ ವಿವಿಧ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು ಮತ್ತು ಪ್ರಧಾನ ಕಾರ್ಯದರ್ಶಿಗಳ ಜೊತೆ ಸುದೀರ್ಘ ಚರ್ಚೆ ನಡೆಸಿದ ಸಿಎಂ, ಬಜೆಟ್ ಘೋಷಣೆಗಳ ಅನುಷ್ಠಾನದಲ್ಲಿ ವಿಳಂಬ ಮಾಡುತ್ತಿರುವ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡರು. ಬಜೆಟ್‌ನಲ್ಲಿ ಘೋಷಿಸಿದ ಯೋಜನೆಗಳು ಕೇವಲ ಕಾಗದದ ಮೇಲೆ ಉಳಿಯಬಾರದು, ಅವು ನಿಗದಿತ ಅವಧಿಯೊಳಗೆ ಜನರಿಗೆ ತಲುಪಬೇಕು ಎಂದು ಕಟ್ಟುನಿಟ್ಟಿನ…
