India – Russia: ಭಯೋತ್ಪಾದನೆ ವಿರುದ್ಧ ಜಂಟಿಯಾಗಿ ಹೋರಾಡಲು ರಷ್ಯಾ-ಭಾರತ ಸಿದ್ಧ
ನವದೆಹಲಿ: ಭಾರತ ಮತ್ತು ರಷ್ಯಾ, (India – Russia) ಭಯೋತ್ಪಾದನೆಯ ಎಲ್ಲಾ ರೂಪಗಳು ಮತ್ತು ಅಭಿವ್ಯಕ್ತಿಗಳ ವಿರುದ್ಧ ಜಂಟಿಯಾಗಿ ಹೋರಾಡುವ ಸಂಕಲ್ಪ ಮಾಡಿವೆ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ದೆಹಲಿಯಲ್ಲಿಂದು ಹೇಳಿದ್ದಾರೆ. ಭಯೋತ್ಪಾದನೆ ಬಗ್ಗೆ ಶೂನ್ಯ ಸಹಿಷ್ಣುತೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭಯೋತ್ಪಾದನೆಯ ಬಗ್ಗೆ ಭಾರತದ ಶೂನ್ಯ ಸಹಿಷ್ಣುತೆಯ ನಿಲುವನ್ನು ಪ್ರಧಾನಿ ಪುನರುಚ್ಚರಿಸಿದ್ದಾರೆ ಮತ್ತು ಈ ಪ್ರಯತ್ನದಲ್ಲಿ ಭಾರತಕ್ಕೆ ರಷ್ಯಾ ಬೆಂಬಲವನ್ನು ನೀಡುವುದಾಗಿ ಅಧ್ಯಕ್ಷ ಪುಟಿನ್ ಹೇಳಿರುವುದಾಗಿ ಅವರು ತಿಳಿಸಿದ್ದಾರೆ. ಉಕ್ರೇನ್‌ನಲ್ಲಿನ ಸಂಘರ್ಷದ ಕುರಿತು ಇತ್ತೀಚಿನ…
