Narendra Modi: ಭಾರತೀಯರ ಸುರಕ್ಷತೆ ಕಾಪಾಡಲು ಕೇಂದ್ರ ಸಿದ್ಧ: ಮೋದಿ
ಕೇರಳಂ: ಪಶ್ಚಿಮ ಏಷ್ಯಾದಲ್ಲಿ ಎದುರಾಗಿರುವ ಬಿಕ್ಕಟ್ಟು ದೇಶದ ಜನರ ಮೇಲೆ ಪರಿಣಾಮ ಬೀರದಂತೆ ಕೇಂದ್ರ ಸರ್ಕಾರ ನಿರಂತರವಾಗಿ ಕ್ರಮ ಕೈಗೊಳ್ಳುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದ್ದಾರೆ. ಭಾರತೀಯರ ಸುರಕ್ಷತೆಗೆ ಸಕಲ ಕ್ರಮ ಕೇರಳಂ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಪಾಲಕ್ಕಾಡ್ ನಲ್ಲಿ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪಶ್ಚಿಮ ಏಷ್ಯಾ ದೇಶಗಳ ಮುಖ್ಯಸ್ಥರೊಂದಿಗೆ ಸಂಪರ್ಕದಲ್ಲಿದ್ದು, ಸಂಘರ್ಷ ವಲಯದಲ್ಲಿರುವ ಭಾರತೀಯರ ಸುರಕ್ಷತೆಗೆ ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು. ಸಂಘರ್ಷದ ಸೂಕ್ಷ್ಮ ವಿಚಾರಗಳಲ್ಲಿ ಪಕ್ಷಗಳು ರಾಜಕೀಯ…
