Yaduveer Wadiyar: ಮಹಿಷಾ ದಸರಾ ಆಚರಣೆಗೆ ಸಂವಿಧಾನದಲ್ಲಿ ಅವಕಾಶವಿದೆ: ಸಂಸದ ಯದುವೀರ್ ಒಡೆಯರ್ ಸ್ಪಷ್ಟನೆ!
ಮೈಸೂರು: ಸಂವಿಧಾನದ ಅಡಿಯಲ್ಲಿ ಪ್ರತಿಯೊಬ್ಬ ನಾಗರಿಕನಿಗೂ ತಮ್ಮ ಧಾರ್ಮಿಕ ಮತ್ತು ಸಾಂಸ್ಕೃತಿಕ ಆಚರಣೆಗಳನ್ನು ನಡೆಸಲು ಸಂಪೂರ್ಣ ಹಕ್ಕು ಹಾಗೂ ಅವಕಾಶವಿದೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ (Yaduveer Wadiyar) ತಿಳಿಸಿದ್ದಾರೆ. ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಹಿಷಾ ದಸರಾ ಆಚರಣೆಯ ಕುರಿತಾಗಿ ತಮ್ಮ ಸ್ಪಷ್ಟ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ಯಾವುದೇ ವ್ಯಕ್ತಿ ಅಥವಾ ಸಮುದಾಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗದಂತೆ ಹಾಗೂ ಯಾರಿಗೂ ತೊಂದರೆಯಾಗದ ರೀತಿಯಲ್ಲಿ ಈ ಆಚರಣೆಯನ್ನು ಕೈಗೊಳ್ಳಬಹುದು ಎಂದು…
