Yogesh Gowda: ಯೋಗೀಶ್ ಗೌಡ ಕೊಲೆ ಕೇಸ್: ಇನ್ಸ್‌ಪೆಕ್ಟರ್ ಟಿಂಗರಿಕರ್ ಸಾಕ್ಷ್ಯ ನಾಶದ ವಿರುದ್ಧ ಸಿಬಿಐ ಭೀಕರ ವಾದ!
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಧಾರವಾಡದ ಬಿಜೆಪಿ ಮುಖಂಡ ಹಾಗೂ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೀಶ್ ಗೌಡ (Yogesh Gowda) ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಐತಿಹಾಸಿಕ ತೀರ್ಪು ಪ್ರಕಟಿಸಿದೆ. ಕೊಲೆಯ ಸಂಚು ರೂಪಿಸಿದ ಪ್ರಮುಖ ಆರೋಪಿಯಾಗಿರುವ ಧಾರವಾಡದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಒಟ್ಟು 16 ಮಂದಿ ದೋಷಿಗಳಿಗೆ ನ್ಯಾಯಾಲಯವು ಜೀವಾವಧಿ ಜೈಲು ಶಿಕ್ಷೆ ಹಾಗೂ ತಲಾ 30 ಸಾವಿರ ರೂಪಾಯಿ ದಂಡ ವಿಧಿಸಿದೆ….
