ಉಡುಪಿ: ಬ್ರಹ್ಮಾವರ (Udupi) ತಾಲೂಕಿನ ಕೋಟತಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಚಿಟ್ಟಿಬೆಟ್ಟು ಎಂಬಲ್ಲಿ ಪರಿಶಿಷ್ಟ ಪಂಗಡದ ಕೊರಗ ಸಮುದಾಯದವರಿಗೆ ನಿರ್ಮಾಣ ಮಾಡಲಾದ ಮನೆಗಳನ್ನ ಹಸ್ತಾಂತರ ಮಾಡಲಾಯಿತು.
8 ಮನೆಗಳ ಹಸ್ತಾಂತರ
ಸುಮಾರು 1 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ 8 ಮನೆಗಳ ಹಸ್ತಾಂತರ ಕಾರ್ಯಕ್ರಮವನ್ನು ಉಡುಪಿ ಪುತ್ತಿಗೆ ಮಠದ ಸುಗುಣೇಂದ್ರ ಶ್ರೀಗಳು ಉದ್ಘಾಟಿಸಿದರು. ಇದೇ ವೇಳೆ ಮನೆ ನಿರ್ಮಾಣ ಕಾರ್ಯದಲ್ಲಿ ಧನ ಸಹಾಯ ನೀಡಿದ ದಾನಿಗಳನ್ನು ಪುತ್ತಿಗೆ ಶ್ರೀಗಳು ಅಭಿನಂದಿಸಿದರು.
ಯಾರೆಲ್ಲಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು?
ಈ ವೇಳೆ ವೇದಿಕೆಯಲ್ಲಿ ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಸಿನಿಮಾ ನಟ ನಿರ್ದೇಶಕ ರಿಷಬ್ ಶೆಟ್ಟಿ, ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮತ್ತಿತರರು ಉಪಸ್ಥಿತರಿದ್ದರು.
ಇದನ್ನೂ ಓದಿ: ಹಂಪಿ ಉತ್ಸವಕ್ಕೆ ಸ್ಥಿರ ದಿನಾಂಕ ನಿಗದಿ ಮಾಡಿದ ಸಿಎಂ ಸಿದ್ದರಾಮಯ್ಯ
