V Somanna: ರೈಲ್ವೆ ಕೆಳ ಸೇತುವೆ ಲೋಕಾರ್ಪಣೆ ಮಾಡಿದ ವಿ ಸೋಮಣ್ಣ

V Somanna inaugurated railway bridge

ತುಮಕೂರು:  ಜಿಲ್ಲೆಯ ಗುಬ್ಬಿ ತಾಲೂಕಿನ ವಿವಿಧೆಡೆ ನೂತನವಾಗಿ ನಿರ್ಮಿಸಿದ ರೈಲ್ವೆ ಕೆಳ ಸೇತುವೆಯನ್ನು ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ (V Somanna) ಇಂದು ಲೋಕಾರ್ಪಣೆ ಮಾಡಿದರು. 

ರೈಲ್ವೆ ಅಭಿವೃದ್ಧಿ ಕಾರ್ಯಗಳು ಪ್ರಗತಿಯಲ್ಲಿದೆ

ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಪ್ರವೀಣ್ ಕಾತರಕಿ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.  ಬಳಿಕ ವಿ. ಸೋಮಣ್ಣ, ರಾಜ್ಯದಲ್ಲಿ 52 ಸಾವಿರ ಕೋಟಿ ರೂಪಾಯಿಗಳಿಗಿಂತ ಹೆಚ್ಚು ಮೌಲ್ಯದ ರೈಲ್ವೆ ಅಭಿವೃದ್ಧಿ ಕಾರ್ಯಗಳು ಪ್ರಗತಿಯಲ್ಲಿವೆ. ಇನ್ನೂ 50 ಸಾವಿರ ಕೋಟಿ ರೂಪಾಯಿ ಅನುದಾನ ದೊರೆಯುವ ನಿರೀಕ್ಷೆ ಇದೆ ಎಂದರು. 

ಈ ರೈಲಿನಿಂದ ಜನರಿಗೆ ಹೆಚ್ಚು ಅನುಕೂಲ

ಪ್ರಸ್ತಾವಿತ ತುಮಕೂರು-ಬೆಂಗಳೂರು ನಡುವಿನ ಚತುಷ್ಪಥ ರೈಲು ಮಾರ್ಗ ಯೋಜನೆಯಿಂದ ಈ ಭಾಗದ ಜನರಿಗೆ ಹೆಚ್ಚಿನ ಅನುಕೂಲವಾಗಲಿದ್ದು, ಸಂಪರ್ಕ ಸುಧಾರಣೆಯಾಗಲಿದೆ ಎಂದು ಹೇಳಿದರು.

ಇದನ್ನೂ ಓದಿ: ಎಲೆಕ್ಟ್ರಾನಿಕ್ಸ್‌ ಮತ್ತು ಸೆಮಿಕಂಡಕ್ಟರ್‌ ಮಿಷನ್‌ ಸಮ್ಮಿಟ್‌ ಆರಂಭ

Leave a Reply

Your email address will not be published. Required fields are marked *