ನಮ್ಮ ದೇಹಕ್ಕೆ ಪೋಷಕಾಂಶ ಅಗತ್ಯ ಹೆಚ್ಚಿದೆ. ಅದಕ್ಕಾಗಿ ಹಣ್ಣು-ತರಕಾರಿಗಳು ಹಾಗೂ ಡ್ರೈ ಫ್ರೂಟ್ಸ್‌ಗಳನ್ನ ಸೇವನೆ ಮಾಡುತ್ತೇವೆ. ಈ ಡ್ರೈ ಫ್ರೂಟ್ಸ್‌ಗಳಲ್ಲಿ ಅನೇಕ ಪೋಷಕಾಂಶಗಳಿರುತ್ತದೆ. ಅದರಲ್ಲೂ ಹೆಚ್ಚಾಗಿ ವಾಲ್ನಟ್ ಸೇವನೆಯು ಇನ್ನೂ ಹೆಚ್ಚಿನ ಪ್ರಯೋಜನಗಳನ್ನು ನೀಡುತ್ತದೆ. ವಾಲ್ನಟ್ಗಳು (Walnuts) ಪ್ರೋಟೀನ್, ಕೊಬ್ಬು, ಕ್ಯಾಲ್ಸಿಯಂ, ಪೊಟ್ಯಾಸಿಯಮ್, ಕಬ್ಬಿಣ, ತಾಮ್ರ, ಒಮೆಗಾ-3 ಕೊಬ್ಬಿನಾಮ್ಲಗಳು, ಮೊನೊಸಾಚುರೇಟೆಡ್ ಕೊಬ್ಬಿನಾಮ್ಲಗಳು, ರಂಜಕ, ಸೆಲೆನಿಯಮ್, ಸತು, ಫೈಬರ್ ಮತ್ತು ಕಾರ್ಬೋಹೈಡ್ರೇಟ್ಗಳನ್ನ ಹೊಂದಿದೆ. ಇದನ್ನ ಸೇವನೆ ಮಾಡುವುದರಿಂದ ಏನೆಲ್ಲಾ ಪ್ರಯೋಜನಗಳು ಸಿಗುತ್ತದೆ ಎಂಬುದು ಇಲ್ಲಿದೆ.
ಹಲ್ಲು ಮತ್ತು ಮೂಳೆಗಳ ಆರೋಗ್ಯಕ್ಕೆ ಉತ್ತಮ
ವಾಲ್ನಟ್ಸ್ ಆಲ್ಫಾ-ಲಿನೋಲೆನಿಕ್ ಆಮ್ಲವನ್ನು ಹೊಂದಿದ್ದು, ಇದು ಮೂಳೆಗಳು ಮತ್ತು ಹಲ್ಲುಗಳನ್ನು ಬಲಪಡಿಸಲು ಸಹಾಯ ಮಾಡುತ್ತದೆ.
ಹೃದಯದ ಆರೋಗ್ಯಕ್ಕೆ
ಇದು ಒಮೆಗಾ-3 ಕೊಬ್ಬಿನಾಮ್ಲಗಳನ್ನು ಹೊಂದಿದ್ದು, ಮುಖ್ಯವಾಗಿ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ ಮತ್ತು ಉತ್ತಮ ಕೊಲೆಸ್ಟ್ರಾಲ್ ಅನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ, ಆರೋಗ್ಯಕರ ಹೃದಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.
ಸಕ್ಕರೆ ಖಾಯಿಲೆಗೆ ಪರಿಹಾರ
ಮುಖ್ಯವಾಗಿ ಇದು ಮಧುಮೇಹ ರೋಗಿಗಳಿಗೆ ಪ್ರಯೋಜನಕಾರಿ ಎನ್ನಲಾಗುತ್ತದೆ. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ ಮತ್ತು ಮಧುಮೇಹವನ್ನು ಕಡಿಮೆ ಮಾಡಲು ಉತ್ತಮ.
ಇದನ್ನೂ ಓದಿ: ಬಿಪಿ ಸಮಸ್ಯೆನಾ? ತೂಕ ಇಳಿಸಬೇಕಾ? ಈ ಗ್ರೀನ್ ಟೀ ಕುಡಿಯಿರಿ ಸಾಕು
